Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:1
43 ತಿಳಿವುಗಳ ಹೋಲಿಕೆ  

ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.


ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.


ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.


ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.


ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.


ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;


ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು