Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:2
39 ತಿಳಿವುಗಳ ಹೋಲಿಕೆ  

ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”


ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,


ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.


ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.


ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.


ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.


ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!


ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.


ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.


ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.


ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,


ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು