Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:5
10 ತಿಳಿವುಗಳ ಹೋಲಿಕೆ  

ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.


ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು