Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಷ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:5
18 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.


ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,


ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.


ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.


ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.


ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.


ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.


ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.


ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.


ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು