Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀನು ನನ್ನ ತಾಯಿಯ ಹಾಲು ಕುಡಿದ ನನ್ನ ಅಣ್ಣನಾಗಿದ್ದರೆ, ಎಷ್ಟೋ ಚೆನ್ನಾಗಿರುತ್ತಿತ್ತು! ನಾನು ನಿನ್ನನ್ನು ಕಂಡು ಹೊರಗೆಯೇ ನಿನಗೆ ಮುದ್ದಿಡುತ್ತಿದ್ದೆ. ಆಗ ಯಾರೂ ನನ್ನನ್ನು ನಿಂದಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:1
40 ತಿಳಿವುಗಳ ಹೋಲಿಕೆ  

ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.


ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.


ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು