Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಹೃದಯದ ಮೇಲೆ, ನಿನ್ನ ಕೈಯಲ್ಲಿ, ನನ್ನನ್ನು ಮುದ್ರೆಯನ್ನಾಗಿ ಧರಿಸಿಕೋ. ಪ್ರೀತಿಯು ಮರಣದಷ್ಟು ಬಲವಾಗಿದೆ, [ಪ್ರೀತಿದ್ರೋಹದಿಂದ ಹುಟ್ಟುವ] ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಅದು ಯೆಹೋವನ ರೋಷಾಗ್ನಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:6
27 ತಿಳಿವುಗಳ ಹೋಲಿಕೆ  

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!


ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’


ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.


“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.


ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು