ಪ್ರಕಟನೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹ್ಯಾ ಪುಸ್ತಕಾತ್ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲೆ ಸಗ್ಳೆ ಲಿವ್ನ್ ಥವಲ್ಲೆ ಹಾಯ್. ಅಪ್ನಾಚ್ಯಾ ಸೆವಕಾಕ್ನಿ ಕಾಯ್-ಕಾಯ್ ಲಗ್ಗುನಾಚ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಕ್ರಿಸ್ತಾನ್ ದೆವ್‍ದುತಾಕ್ ಧಾಡುನ್ ಅಪ್ನಾಚ್ಯಾ ಸೆವಕಾಕ್ ಜುವಾಂವಾಕ್ ಹೆ ಸಗ್ಳೆ ಕಳ್ವುಲ್ಯಾನ್. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,