Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜೆಕ್ನಾ ಕೊನ್ ಬೊಲುಲಾ ಮನುನ್ ಬಗುಸಾಟ್ನಿ ಮಿಯಾ ಫಾಟಿ ಪರತ್ಲೊ, ತನ್ನಾ ಮಿಯಾ ಸಾತ್ ಸೊನ್ಯಾಚೆ ದಿವೆ ಲಾವ್ತಲೆ ಖಾಂಬೆ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:12
11 ತಿಳಿವುಗಳ ಹೋಲಿಕೆ  

“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.


ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು