Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಕಾ ಬಗಟಲ್ಲ್ಯಾ ತನ್ನಾ ಮರಲ್ಲ್ಯಾ ಸರ್ಕೊ ಹೊವ್ನ್ ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡ್ಲೊ, ತೆನಿ ಅಪ್ನಾಚೊ ಹಾತ್ ಮಾಜೆ ವರ್ತಿ ಥವ್ಲ್ಯಾನ್ ಅನಿ, ಭಿಂವ್‍ನಕೊ ಮಿಯಾಚ್ ಆರಂಬ್ ಅನಿ ಅಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:17
30 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.


ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.


ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.


ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು