Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುವಾಂವಾಕ್ ಆಸಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ. ಜೆ ಹಾಯ್, ಫಾಟಿಬಿ ಹೊತ್ತೊ ಅನಿ ಅನಿ ಫಿಡೆ ಯೆತಲೊ ಹಾಯ್ ತ್ಯಾ ದೆವಾಕ್ನಾ ಅನಿ ಸಿವಾಸನಾಚ್ಯಾ ಇದ್ರಾಕ್ ಅಸಲ್ಲೆ ಸಾತ್ ಆತ್ಮ್ಯಾಂಚ್ಯಾಕ್ನಾ ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:4
41 ತಿಳಿವುಗಳ ಹೋಲಿಕೆ  

ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.


ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.


ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು