Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೊ ಹಾಯ್, ಜೊ ಹೊತ್ತೊ ಅನಿ ಅನಿಫಿಡೆ ಯೆತಲೊ ಹಾಯ್ ತೊ ಸರ್ವ ಶಕ್ತಿಮಾನ್ ದೆವ್ ಮನ್ತಾ, “ಜೊ ಹಾಯ್, ಜೊ ಹೊತ್ತೊ, ಅನಿ ಫಿಡೆ ಯೆತಲೊ ಸಗ್ಳ್ಯಾನ್ ಮೊಟೊ ದೆವ್” ಆರಂಬ್ ಅನಿ ಅಂತ್ ಮಿಯಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:8
29 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.


ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು