Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:9
35 ತಿಳಿವುಗಳ ಹೋಲಿಕೆ  

ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.


ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.


ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು