Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಮಾಕಾ, ಅನಿ ಎಗ್ದಾ ತಿಯಾ ಸುಮಾರ್ ದೆಶಾಕ್ನಿ, ಕುಳಿಯಾಕ್ನಿ, ಬಾಶ್ಯಾಂಚ್ಯಾ ಲೊಕಾಕ್ನಿ, ಅನಿ ರಾಜಾಕ್ನಿ ದೆವಾಚಿ ಬಾತ್ಮಿ ಸಾಂಗುಕ್ ಜಾಯ್, ಮನುನ್ ಸಾಂಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:11
13 ತಿಳಿವುಗಳ ಹೋಲಿಕೆ  

ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.


ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.


ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.


ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.


ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.


“ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.


ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು