ಪ್ರಕಟನೆ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆನಿ ಬೊಲಲ್ಲ್ಯಾ ತನ್ನಾ ತಾಬೊಡ್ತೊಬ್ ಮಿಯಾ ಲಿವ್ನಾರ್ ಹೊತ್ತೊ. ಖರೆ ಸರ್‍ಗಾ ವೈನಾ ಬೊಲ್ತಲೊ ಎಕ್ ಧನ್ ಮಾಕಾ ಆಯ್ಕೊ ಯೆಲೊ,“ಸಾತ್ ಗುಡ್ಗುಡ್ಯಾನಿ ಸಾಂಗಲ್ಲೆ ಘುಟಾನ್ ಥವ್; ತೆ ಲಿವ್ನ್ ಘೆವ್‍ನಕೊ!” ಅಧ್ಯಾಯವನ್ನು ನೋಡಿ |