ಪ್ರಕಟನೆ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
7 ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
7 ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.
7 ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.
ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.