Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಆ ದೂತನ ಬಳಿಗೆ ಹೋಗಿ - ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ - ನೀನು ಇದನ್ನು ತೆಗೆದುಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಆ ದೇವದೂತನ ಬಳಿಗೆ ಹೋಗಿ, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಆ ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದೆವ್‍ದುತಾಕ್ಡೆ ಜಾವ್ನ್ ತಿ ಸುಳ್ಳಿ ಮಾಕಾ ದಿ ಮನುನ್ ಇಚಾರ್ಲೊ. ತ್ಯಾ ದೆವಾಚ್ಯಾ ದುತಾನ್ ಮಾಕಾ, “ಹೆ ಘೆ ಅನಿ ಖಾ; ಹೆ ತುಜ್ಯಾ ಪೊಟಾತ್ ಜಾವ್ನ್ ಅಂಬೊಟ್ ಹೊತಾ, ಖರೆ ತುಜ್ಯಾ ತೊಂಡಾತ್ ತೆ ಮ್ಹವಾ ಸರ್ಕೆ ಗೊಡ್ ರ್‍ಹಾತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:9
7 ತಿಳಿವುಗಳ ಹೋಲಿಕೆ  

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು