Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಮಾಕಾ ಎಕ್ ಖಾಟಿ ದಿಲ್ಯಾನಿ ತಿ ಎಕ್ ಮಾಪ್ ಘೆತಲ್ಯಾ ಖಾಟಿ ಸರ್ಕಿ ಖಾಟಿ ಹೊತ್ತಿ, ಅನಿ ಮಾಕಾ, “ಜಾ ಅನಿ ದೆವಾಚಿ ಗುಡಿ ಆಲ್ತಾರ್ ಮಾಪ್, ಅನಿ ದೆವಾಚ್ಯಾ ಗುಡಿತ್ ಆರಾದನ್ ಕರ್ತಲಿ ಲೊಕಾ ಮೆಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:1
15 ತಿಳಿವುಗಳ ಹೋಲಿಕೆ  

ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು