ಪ್ರಕಟನೆ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಧನಿಯಾ ಸಗ್ಳ್ಯಾನಿಕಿ ಮೊಟ್ಯಾ ದೆವಾ ಅತ್ತಾ ಅಸಲ್ಲ್ಯಾ ಅನಿ ಫಾಟಿ ಹೊತ್ತ್ಯಾ! ತಿಯಾ ತುಜೊ ಮೊಟೊ ಅದಿಕಾರ್ ತುಜ್ಯಾ ತಾಬೆತ್ ಘೆಟ್ಲೆ ಅನಿ ಅಧಿಕಾರ್ ಚಾಲ್ವುಕ್ ಚಾಲು ಕರ್‍ಲೆ ಮನುನ್ ತುಕಾ ಧನ್ಯವಾದ್ ದಿತಾಂವ್! ಅಧ್ಯಾಯವನ್ನು ನೋಡಿ |
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.