Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಸರ್ಗಾತ್ ದೆವಾಚಿ ಗುಡಿ ಉಗಡ್ಲಿ ಅನಿ ಕರಾರಾಚೊ ಡಬ್ಬೊ ಥಯ್ ದಿಸ್ಲೊ. ತನ್ನಾ ಮಿಂಚ್ ಮಾರುಕ್‍ಲಾಗ್ಲೆ ಗಜ್ನಿಯಾಂಚೊ ಅವಾಜ್ ಹೊವ್ಕ್ ಲಾಗ್ಲೊ, ಅನಿ ಗುಡ್ಗುಡೊ ಉಟ್ಲೊ ಭುಕಂಪ್ ಹೊಲೊ, ಅನಿ ಘಾರ್ಬಿಯಾಂಚೊ ಪವ್ಸ್ ವೊತ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:19
33 ತಿಳಿವುಗಳ ಹೋಲಿಕೆ  

ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.


ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.


ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’


ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,


ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು