ಪ್ರಕಟನೆ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಗೊನಿ ಚಿಲಾಚೆ ಕಪ್ಡೆ ನೆಸಲ್ಲ್ಯಾ ದೊಗ್ಯಾ ಮಾಜ್ಯಾ ಸಾಕ್ಷಿಯಾಕ್ನಿ ಧಾಡುನ್ ದಿತಾ, ಅನಿ ತೆನಿ ತ್ಯಾ ಎಕ್ ಹಜಾರ್ ದೊನ್ಸೆ ಸಾಟ್ ದಿಸಾತ್ನಿ ದೆವಾಚಿ ಬಾತ್ಮಿ ಸಾಂಗ್ತ್ಯಾತ್”. ಮನುನ್ ಸಾಂಗುನ್ ಹೊಲೆ. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.