Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆ ದೊಗೆ ಸಾಕ್ಷಿ ದೊನ್ ಒಲಿವ್ ಝಾಡಾ ಅನಿ ಜಿಮ್ನಿಚ್ಯಾ ಧನಿಯಾಚ್ಯಾ ಇದ್ರಾಕ್ ಇಬೆ ಅಸಲ್ಲೆ ದೊನ್ ದಿವ್ಯಾಚೆ ಖಾಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:4
14 ತಿಳಿವುಗಳ ಹೋಲಿಕೆ  

ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.


ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.


ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು