Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕೊನ್‍ಬಿ ತೆಂಕಾ ಧಕ್ಕೊ ಕರುಕ್ ಬಗಟ್ಲ್ಯಾರ್, ತೆಂಚ್ಯಾ ತೊಂಡಾನಿತ್ನಾ ಆಗ್ ಭಾಯ್ರ್ ಯೆವ್ನ್ ತೆಂಚ್ಯಾ ದುಸ್ಮಾನಾಕ್ನಿ ನಾಸ್ ಕರುನ್ ಸೊಡ್ತಾ; ಅಸೆ ತೆಂಕಾ ಧಕ್ಕೊ ಕರುಕ್ ಬಗಟಲ್ಲ್ಯಾಕ್ನಿ ಜಿವಾನಿಚ್ ಮಾರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:5
13 ತಿಳಿವುಗಳ ಹೋಲಿಕೆ  

ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.


ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.


ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು