Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಕಲ ಪ್ರಜೆ ಕುಲ ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು; ಅವುಗಳನ್ನು ಸಮಾಧಿಯಲ್ಲಿ ಇಡಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಗ್ಳ್ಯಾ ದೆಶಾಂಚಿ, ಕುಳಿಯಾಂಚಿ, ಘರಾನಾಂಚೆ, ಅನಿ ಬಾಶಾಂಚಿ ಲೊಕಾ ಸಾಡೆ ತಿನ್ ದಿಸ್ ತೆಂಚ್ಯಾ ಮಡ್ಯಾಕ್ನಿ ಬಗ್ತ್ಯಾತ್, ಅನಿ ತ್ಯಾ ಮಡ್ಯಾಕ್ನಿ ಮಾಟಿ ದಿವ್ಕ್ ದಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:9
14 ತಿಳಿವುಗಳ ಹೋಲಿಕೆ  

ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು