Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ಭಯಾನಕ್ ಸಾಪ್ ಹಾರ್‍ತಾ, ಅನಿ ಅನಿಫಿಡೆ ತೆಕಾ ಅನಿ ತ್ಯೆಚ್ಯಾ ದುತಾಕ್ನಿ ಸರ್‍ಗಾ ವರ್ತಿ ಜಾಗೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:8
18 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.


ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.


ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ.


ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.


ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು