Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನಾಕ್‍ ದರುನ್ ಘೆವ್ನ್ ಜಾವ್ನ್ ಹೊತಾ ಮನುನ್ ಹಾಯ್ ತೆಂಕಾ ಖರ್‍ಯಾನಿಚ್ ದರುನ್ ಘೆವ್ನ್ ಜಾವ್ನ್ ಹೊತಾ; ಜೆ ಕೊನಾಕ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರ್ತಲೆ ಮನುನ್ ಹಾಯ್, ತೆಂಕಾ ಖರ್‍ಯಾನಿಚ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊತಾ. ಹಿತ್ತೆ ದೆವಾಚ್ಯಾ ಲೊಕಾಕ್ನಿ ಖರೆಚ್ ಸೊಸುನ್ ಘೆವ್ಕ್ ಅನಿ ವಿಶ್ವಾಸ್, ರ್‍ಹಾವ್ಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:10
29 ತಿಳಿವುಗಳ ಹೋಲಿಕೆ  

ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,


ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು