Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜಿಮ್ನಿತ್ನಾ ವೈರ್ ಯೆಲ್ಲೆ ಅನಿ ಎಕ್ ಭಯಾನಕ್ ಜನಾವರ್ ಮಿಯಾ ಬಗಟ್ಲೊ, ತೆಕಾ ಬೊಕ್ಡಾಚ್ಯಾ ಸರ್ಕಿ ದೊನ್ ಶಿಂಗಾ ಹೊತ್ತಿ, ಅನಿ ತೆ ಎಕ್ ಭಯಾನಕ್ ಸಾಪಾಚ್ಯಾ ಸರ್ಕೆ ಬೊಲುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:11
17 ತಿಳಿವುಗಳ ಹೋಲಿಕೆ  

ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.


ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.


ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು