ಪ್ರಕಟನೆ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ಪಯ್ಲೆಚ್ಯಾ ಜನಾವರಾಚ್ಯಾ ಇದ್ರಾಕ್ ಅಜಾಪ್ ಕಾಮಾ ಕರ್ತಲೊ ಅದಿಕಾರ್ ಹೊತ್ತ್ಯಾ ಬಳಾನ್ ಜಿಮ್ನಿ ವರ್ತಿ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ತೆನಿ ಪಶ್ವುಲ್ಯಾನ್ ತ್ಯಾ ಜನಾವರಾನ್ ತ್ಯಾ ಮೊಟ್ಯಾ ಚಾಕ್ವಾನಿ ಮಾರುನ್ ಘಾಯ್ ಹೊವ್ನ್ ಅಜುನ್ ಝಿತ್ತೆ ಹೊತ್ತ್ಯಾ ಜನಾವರಾಚ್ಯಾ ಯಾದಿಸಾಟ್ನಿ ಅನಿ ತ್ಯೆಚ್ಯಾ ಗೌರವಾಸಾಟ್ನಿ ಮುರ್ತಿಯಾ ಕರಾ ಮನುನ್ ಹುಕುಮ್ ದಿಲ್ಯಾನ್ . ಅಧ್ಯಾಯವನ್ನು ನೋಡಿ |