ಪ್ರಕಟನೆ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
15 ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.