Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ದೆವಾಚ್ಯಾ ಲೊಕಾಕ್ನಿ ದೆವಾಚ್ಯಾ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಅನಿ ಜೆಜುಕ್ ವಿಶ್ವಾಸುನ್ ಹೊತ್ತ್ಯಾಕ್ನಿ ಸಂಬಾಳುನ್ ಘೆವ್ನ್ ರ್‍ಹಾವ್ಕ್ ಬಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:12
7 ತಿಳಿವುಗಳ ಹೋಲಿಕೆ  

ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು