ಪ್ರಕಟನೆ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಶಾರಾಚ್ಯಾ ಭಾಯ್ರ್ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ದ್ರಾಕ್ಷಿಯಾ ಪಿಳುನ್ ಹೊಲ್ಲ್ಯಾ ತನ್ನಾ, ತ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ನಾ ರಗ್ತಾಚೊ ಹೊವಾರೊ ದೊನ್‍ಸೆ ಮೈಲಾ ದುರ್ ಪರತ್ ಹೊಂವ್ಲೊ, ತೊ ಹೊವಾರೊ ಟಕ್ಕಲ್ಬರ್ ಖೊಲ್ ಹೊತ್ತೊ. ಅಧ್ಯಾಯವನ್ನು ನೋಡಿ |