Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾನಾ ಮಳ್ಬಾ ವರ್ತಿ ಹುಡ್ತಲೊ ಅನಿಎಕ್ ದೆವ್‍ದುತಾ ಮಿಯಾ ಬಗಟ್ಲೊ, ತೊ ಹ್ಯಾ ಜಗಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಗ್ಳ್ಯಾ ಕುಳಿಯಾ, ಘರಾನ್ಯಾಚೆ ಬಾಶಾ, ಅನಿ ದೆಶಾಂಚ್ಯಾ ಲೊಕಾಕ್ನಿ ಸಾಂಗ್ತಲಿ ಎಕ್ ಕನ್ನಾಚ್ ಸರಿನಸಲ್ಲಿ ಬರ್‍ಯಾ ಖಬ್ರೆಚಿ ಬಾತ್ಮಿ ಘೆವ್ನ್ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:6
30 ತಿಳಿವುಗಳ ಹೋಲಿಕೆ  

ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.


ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.


ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು