Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಮೊಟ್ಯಾನ್,“ದೆವಾಕ್ ಮಾನ್ ಕರಾ ಅನಿ ತ್ಯೆಚ್ಯಾ ಮೊಟ್ಯಾಪಾನಾಚೆ ಸ್ತುತಿ ಕರಾ!, ಸಗ್ಳ್ಯಾ ಲೊಕಾಂಚಿ ಝಡ್ತಿ ಕರ್ತಲೊ ತೆಚೊ ಎಳ್ ಯೆವ್ನ್ ಪಾವ್ಲಾ. ಸರ್ಗ್, ಜಿಮಿನ್, ಸಮುಂದರ್ ಅನಿ ಪಾನಿಯಾಚೆ ಝರಿಯಾ ಕರಲ್ಲ್ಯಾಕ್ ಆರಾದನ್ ಕರಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:7
44 ತಿಳಿವುಗಳ ಹೋಲಿಕೆ  

ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.


ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,


“ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!


“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”


ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು