Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:3
49 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,


ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.


ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.


ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ


ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು