Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನಗುಡಾರದ ಪವಿತ್ರಸ್ಥಾನವು ತೆರೆಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆಚ್ಯಾ ಮಾನಾ ಸರ್ಗಾತ್ ಗುಡಿ ಉಗಡಲ್ಲೆ ಮಿಯಾ ಬಗಟ್ಲೊ. ತ್ಯಾತುರ್ ಎಕ್ ಪವಿತ್ರ್ ಝೊಪ್ಡೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:5
8 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.


ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು