Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತ್ಯಾ ಬುರ್ಶ್ಯಾ ಆತ್ಮ್ಯಾನಿ ರಾಜಾಕ್ನಿ ಗೊಳಾ ಕರುನ್ ಹೆಬ್ರೆವ್ ಬಾಶೆತ್ ಆರ್ಮ್‍ಗೆದ್ದೊನ್ ಮನುನ್ ಬಲ್ವುತಲ್ಯಾ ಜಾಗ್ಯಾಕ್ ಹಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:16
14 ತಿಳಿವುಗಳ ಹೋಲಿಕೆ  

ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.


“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.


ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು