ಪ್ರಕಟನೆ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮೊಟೆ ಶಾರ್ ತಿನ್ ಭಾಗಾ ಹೊವ್ನ್ ಎಗಳ್ಳೆ ಅನಿ ಸಗ್ಳ್ಯಾ ದೆಶಾಂಚಿ ಶಾರಾ ನಾಸ್ ಹೊವ್ನ್ ಗೆಲಿ. ದೆವಾನ್ ಬಾಬಿಲೊನಾಚಿ ಯಾದ್ ಕರ್ಲ್ಯಾನ್, ಅನಿ ತಿಕಾ ಅಪ್ನಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ಕ್ ದಿಲ್ಯಾನ್. ಅಧ್ಯಾಯವನ್ನು ನೋಡಿ |