Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಕಂಡ ಆ ಹತ್ತು ಕೊಂಬುಗಳು ಅಂದರೆ ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ಅರಸುಗಳು. ಅವರು ಒಂದು ಗಳಿಗೆಯವರೆಗೆ ರಾಜರಂತೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ತಿಯಾ ಬಗಲ್ಲಿ ಶಿಂಗಾ ಮಟ್ಲ್ಯಾರ್ ಅಜುನ್ ರಾಜ್ ಚಾಲ್ವುಕ್ ಯೆಯ್‍ನಸಲ್ಲೆ ಧಾ ರಾಜಾ, ಖರೆ ಭಯಾನಕ್ ಜನಾವಾರಾಕ್ಬಿ ಎಕ್ ತಾಸ್ ರಾಜ್ ಚಾಲ್ವುತಲೊ ಆಧಿಕಾರ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:12
12 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.


ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,


ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು