ಪ್ರಕಟನೆ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು. ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು. ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಯಾಪಾರಾಚಿ ಲೊಕಾ ತಿಕಾ,“ತಿಯಾ ಆಶ್ಯಾ ಕರಲ್ಲಿ ತುಜಿ ಸಗ್ಳಿ ಸಾಮಾನಾ ನಾ ಹೊವ್ನ್ ಗೆಲಿ, ಅನಿ ಸಗ್ಳೆ ತುಜೆ ಬದಿಕ್ ಅನಿ ಉಜ್ವೊಡ್ ಸಗ್ಳೆ ನಾಸ್ ಹೊವ್ನ್ ಗೆಲೆ, ಅನಿ ಫಿಡೆ ತಿ ತುಕಾ ಕನ್ನಾಬಿ ಗಾವಿನ್ಯಾತ್!” ಮನ್ತ್ಯಾತ್. ಅಧ್ಯಾಯವನ್ನು ನೋಡಿ |