Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಧುಳ್ ಅಪ್ನಾಚ್ಯಾ ಟಕ್ಲ್ಯಾ ವೈನಿ ಟಾಕುನ್ ಘೆಟ್ಲ್ಯಾನಿ, ಅನಿ, “ಕಸ್ಲಿ ಗತ್ ಹಿ! ಮೊಟ್ಯಾ ಶಾರಾಚೊ ಕಸ್ಟ್ ಕವ್ಡೊ ಮೊಟೊ ಹೊ! ತ್ಯೆಚ್ಯಾ ಆಸ್ತಿಚ್ಯಾ ವೈನಾ ಸಮುಂದರಾತ್ ಢೊನಿಯಾ ಇಕ್ತಲೆ ಸಗ್ಳೆ ಜಾನಾ ಸಾವ್ಕಾರ್ ಹೊಲೆ! ಖರೆ ಎಕುಚ್ ಎಕ್ ತಾಸಾತ್ ಮಟ್ಲ್ಯಾರ್ ತಿಚೆ ಸಗ್ಳೆ ಹಾಳ್ ಹೊವ್ನ್ ಗೆಲೆ!” ಮನುನ್ ರಡ್ಲ್ಯಾನಿ ಅನಿ ಮರಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:19
13 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.


ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,


ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.


ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು