Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಮೊಟ್ಯಾ ಅವಾಜಾನ್. “ತಿ ಪಡುನ್ ಗೆಲಾ! ಮೊಟೆ ಬಾಬಿಲೊನ್ ಪಡುನ್ ಗೆಲೆ! ತೆ ಗಿರ್‍ಯಾಂಚೊ, ಅನಿ ಬುರ್ಶ್ಯಾ ಅತ್ಮ್ಯಾಂಚೊ ಠಿಕಾನೊ ಹೊವ್ನ್ ಹೊತ್ತೆ, ಹೊಯ್ ಸಗ್ಳ್ಯಾ ಥರಿಚಿ ಪೊಜ್ಡಿ, ಅನಿ ಬುರ್ಶಿ ಫಾಂಕ್ರಾ ತಿಚ್ಯಾ ಭುತ್ತುರ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:2
26 ತಿಳಿವುಗಳ ಹೋಲಿಕೆ  

ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.


ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.


ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.


ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.


ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು