Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಎಕ್ ಘಟ್‍ಮುಟ್ ದೆವಾಚ್ಯಾ ದುತಾನ್ ಎಕ್ ಮೊಟ್ಯಾ ದಳ್ತಲ್ಯಾ ಗುಂಡ್ಯಾ ಸರ್ಕೊ ಎಕ್ ಮೊಟೊ ಗುಂಡೊ ಉಕ್ಲುನ್ ಘೆಟ್ಲ್ಯಾನ್, ಅನಿ ಸಮುಂದರಾಚ್ಯಾ ವರ್ತಿ ಟಾಕುನ್ ಅಸೆ. “ಅಸೆಚ್ ಬಾಬಿಲೊನ್ ಶಾರಾಕ್ ಕಟೊರ್ ರಿತಿನ್ ಖಾಲ್ತಿ ಟಾಕುನ್ ಹೊತಾ ಅನಿ ಅನಿಫಿಡೆ ತೆ ಕನ್ನಾಚ್ ಬಗುಕ್ ಗಾವಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:21
14 ತಿಳಿವುಗಳ ಹೋಲಿಕೆ  

ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.


ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.


ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.


ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.


ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.


ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.


ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು