Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಸರ್ಗಾತ್ ಎಕ್ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಬೊಬೆ ಸರ್ಕೊ ಅವಾಜ್ ಮಾಕಾ ಆಯ್ಕೊ ಯೆಲೊ. ತೆನಿ, “ಹಲ್ಲೆಲುಯಾ! ಸುಟ್ಕಾ, ಮಹಿಮಾ ಅನಿ ಬಳ್ ಅಮ್ಚ್ಯಾ ದೆವಾಕ್ ಸಮಂದ್ ಪಡಲ್ಲಿ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:1
23 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.


ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”


ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.


ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.


ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು