ಪ್ರಕಟನೆ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.