Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯೆಚ್ಯಾ ಝಗ್ಯಾ ವರ್ತಿ ಅನಿ ಜಾಂಗೆ ವರ್ತಿ “ರಾಜಾಂಚೊ ರಾಜಾ ಅನಿ ಧನಿಯಾಚೊ ಧನಿ”, ಮನುನ್ ನಾಂವ್ ಲಿವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:16
13 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು