Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕೂತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವದಕ್ಕಾಗಿ ಕೂಡಿ ಬಂದಿರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೆ ಭಯಾನಕ್ ಜನಾವರ್ ಅನಿ ಜಗಾತ್ಲೆ ಸಗ್ಳೆ ರಾಜಾ ಅಪ್ನಾಚೆ ಸೈನಿಕಾಂಚೆ ತಾಂಡೆ ಘೆವ್ನ್ ಘೊಡ್ಕ್ಯಾಚ್ಯಾ ವೈನಾ ಸವಾರಿ ಕರ್ತಲ್ಯಾಚ್ಯಾ, ಅನಿ ತ್ಯೆಚ್ಯಾ ಸೈನಿಕಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಮಾರಾಮಾರಿ ಕರುಕ್ ಗೊಳಾ ಹೊಲ್ಲೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:19
14 ತಿಳಿವುಗಳ ಹೋಲಿಕೆ  

ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು