ಪ್ರಕಟನೆ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ. ಅಧ್ಯಾಯವನ್ನು ನೋಡಿ |