ಪ್ರಕಟನೆ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮ್ಕಾ ಕಸ್ಟ್ ಸೊಸುಕ್ ಪಾಜೆ ಮನುನ್ ತುಮಿ ಭಿಂವ್ನಕಾಶಿ.ಆಯ್ಕಾ! ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ ಬಂದಿಖಾನ್ಯಾತ್ ಘಾಲಿ ಸರ್ಕೆ ಕರುನ್ ಗಿರೊ ತುಮ್ಚಿ ಪರಿಕ್ಷಾ ಕರ್ತಾ ಅನಿ ಧಾ ದಿಸಾತ್ನಿ ಮಟ್ಲ್ಯಾರ್ ತುಮ್ಚೊ ತರಾಸಾಚೊ ಎಳ್ ಸರ್ತಾ. ಮರಿ ಪತರ್‍ಬಿ ತುಮಿ ಮಾಕಾ ವಿಶ್ವಾಸಾನ್ ರ್‍ಹಾವಾ ಅನಿ ಜಿಕಲ್ಲ್ಯಾಚೆ ಮುಕುಟ್ ಮನುನ್ ಜಿವ್ ಮಿಯಾ ತುಮ್ಕಾ ದಿತಾ. ಅಧ್ಯಾಯವನ್ನು ನೋಡಿ |