Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:17
24 ತಿಳಿವುಗಳ ಹೋಲಿಕೆ  

ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು


ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.


ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು