ಪ್ರಕಟನೆ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬೆಂಕಿಯ ಉರಿಯಂತಿರುವ ಕಣ್ಣುಗಳೂ ತಾಮ್ರದಂತಿರುವ ಪಾದಗಳೂ ಉಳ್ಳ ದೇವಕುಮಾರನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಪರೋಪಕಾರವನ್ನೂ ತಾಳ್ಮೆಯನ್ನೂ ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮಿ ಕಾಯ್ ಕರ್ತ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಚೊ ಪ್ರೆಮ್, ತುಮ್ಚೊ ವಿಶ್ವಾಸ್, ತುಮ್ಚಿ ಸೆವಾ, ಅನಿ ತುಮಿ ಸೊಸುನ್ ಘೆವ್ನ್ ಜಾತಲೆ ತೆ ಸಗ್ಳೆ ಮಾಕಾ ಗೊತ್ತ್ ಹಾಯ್. ಪಯ್ಲೆಚ್ಯಾನ್ಕಿಬಿ ಜಾಸ್ತಿಚೆಚ್ ತುಮಿ ಹೆ ಸಗ್ಳೆ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |