Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಿಯಾ ಕಾಯ್-ಕಾಯ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ಕವ್ಡೆ ಸೊಸುನ್ ಘೆವ್ನ್ ಕವ್ಡ್ಯಾ ತರಾಸಾನ್ ಕಾಮ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್, ಬುರ್ಶಿ ಲೊಕಾ ಮಟ್ಲ್ಯಾರ್ ತುಕಾ ಸೊಸುನ್ ಘೆವ್ಕ್ ಹೊಯ್ನಾ, ಅನಿ ಅಪ್ನಿ ಅಪೊಸ್ತಲಾ ಮನುನ್ ಸಾಂಗ್ತಲ್ಯಾಂಚಿ ತಿಯಾ ಪರಿಕ್ಷಾ ಕರುನ್ ಬಗಟ್ಲೆ, ಅನಿ ತೆನಿ ಅಪೊಸ್ತಲಾ ನ್ಹಯ್ ಝುಟಿ ಲೊಕಾ ಮನುನ್ ದಾಕ್ವುನ್ ದಿಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:2
21 ತಿಳಿವುಗಳ ಹೋಲಿಕೆ  

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.


ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು